ರಾಯಚೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಯಚೂರು ತಾಲೂಕಿನ ಸರಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ(ರಿ) ದ ಅಧ್ಯಕ್ಷರಾಗಿ , ಉಡಮಗಲ್ ಖಾನಾಪುರ್ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪರಶುರಾಮ್ ಹುಜರತಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಪೊಲೀಸ್ ಕಾಲೋನಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಯoಕಪ್ಪ ಪಿರಂಗಿ, ಕಾರ್ಯದರ್ಶಿಯಾಗಿ ಅರಬ್ ಮೊಹಲ್ಲಾ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಶಕುಂತಲಾ, ಖಜಾಂಚಿಯಾಗಿ ಉರ್ದು ಪೊಲೀಸ್ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಕವಿತಾ, ಸಂಘಟನಾ ಕಾರ್ಯದರ್ಶಿಯಾಗಿ ಜಯರಾಬಾದ್ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ರಾಜಶ್ರೀ ಸಜ್ಜನ್, ಜಂಟಿ ಕಾರ್ಯದರ್ಶಿಯಾಗಿ ಕೆಇಬಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪರಿಮಳ ದೇವಿ ಭಂಡಾರಿ, ಇವರುಗಳು ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಕೃಷ್ಣ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ ಯರಮರಸ್ ರವರು ತಿಳಿಸಿದ್ದಾರೆ.
ರಾಯಚೂರು ತಾಲೂಕಿನ ಗ್ರೇಡ -1 ದೈಹಿಕ ಶಿಕ್ಷಣ ಶಿಕ್ಷಕರು ಒಮ್ಮತದಿಂದ ಅವಿರೋಧವಾಗಿ ನಮ್ಮನ್ನೆಲ್ಲ ಆಯ್ಕೆ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಅಧ್ಯಕ್ಷರಾದ ಪರಶುರಾಮ ಹುಜರತಿ ತಿಳಿಸಿದರು, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳನ್ನು ಬದ್ಧತೆಯಿಂದ ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್