ತಾಯಂದಿರ ಮರಣ ಶೂನ್ಯಕ್ಕೆ ತರಲು ಶ್ರಮಿಸಿ : ನಿತೀಶ್ ಕೆ
ರಾಯಚೂರ, 04 ಮಾರ್ಚ್ (ಹಿ.ಸ.): ಆ್ಯಂಕರ್ : ರಾಯಚೂರ ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ತಿಳಿಸಿದ್ದಾರೆ. ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲ
ತಾಯಂದಿರ ಮರಣ ಶೂನ್ಯಕ್ಕೆ ತರಲು ಶ್ರಮಿಸಿ: ನಿತೀಶ್ ಕೆ


ತಾಯಂದಿರ ಮರಣ ಶೂನ್ಯಕ್ಕೆ ತರಲು ಶ್ರಮಿಸಿ: ನಿತೀಶ್ ಕೆ


ರಾಯಚೂರ, 04 ಮಾರ್ಚ್ (ಹಿ.ಸ.):

ಆ್ಯಂಕರ್ : ರಾಯಚೂರ ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ತಿಳಿಸಿದ್ದಾರೆ.

ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಾಣಿ ವಿಲಾಸ ಮೆಡಿಕಲ್ ಕಾಲೇಜ್ ಇವರ ಸಹಯೋಗದಲ್ಲಿ ಮಂಗಳವಾರ ನಡೆದ `ಪ್ರಸೂತಿ ಆರೈಕೆ’ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಯಂದಿರರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವಂತ ಸೌಲಭ್ಯಗಳನ್ನು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವಂತೆ ಮಾಡುವ ಮೂಲಕ ರಾಜ್ಯಕ್ಕೆ ರಾಯಚೂರು ಜಿಲ್ಲೆಯು ಮಾದರಿಯಾಗಬೇಕು. ಈ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಕಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ವಿಜಯ ಶಂಕರ ಅವರು ಮಾತನಾಡಿ, ನರ್ಸಿಂಗ್ ಅಧಿಕಾರಿಗಳು ನಿರ್ಲಕ್ಷ್ಯತೆ ವಹಿಸದೆ ತಮ್ಮ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಿಂದುಳಿದ ಈ ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಇಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ರಿಮ್ಸ್ ಸಂಸ್ಥೆಯಲ್ಲಿ ಕೂಡ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ನಸಿರ್ಂಗ್ ಅಧಿಕಾರಿಗಳು ರೋಗಿಗಳೊಂದಿಗೆ ಬೆರತು ಸೇವೆ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ನೂರರಷ್ಟು ಹೆರಿಗೆ ಮಾಡಿಸಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, ಜಿಲ್ಲೆಯ ಜಿಲ್ಲಾಧಿಕಾರಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿವೆ. ಆರೋಗ್ಯ ವಿಚಾರವಾಗಿ ಜಿಲ್ಲಾಧಿಕಾರಿಗಳು ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದ್ದಾರೆ. ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯು ತರಬೇತಿಯನ್ನು ಸರಿಯಾಗಿ ಪಡೆದುಕೊಂಡು ಇನ್ನೂ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

ರಿಮ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ರಮೇಶ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಡಾ.ಅಶೋಕ, ಡಾ.ರಂಗನಾಥ, ನವೋದಯ ಡೀನ್ ದೇವನಂದ, ರಾಯಚೂರು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande