ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ಬೆಂಗಳೂರು ಸಿಸಿಬಿ ಮತ್ತು ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು. ಬಂಧಿತರಿಂದ 17 ಲಕ್ಷ ಮೌಲ್ಯದ 108 ಗ್ರಾಂ ಎಂಡಿಎಂಎ, ಎರಡು ಮೊಬೈಲ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಮುಂಬೈನಿಂದ ಮಾದಕ ದ್ರವ್ಯ ತಂದು ಬೆಂಗಳೂರಿನಲ್ಲಿ, ಮಾರಾಟ ಮಾಡುತ್ತಿದ್ದರು. ಆರೋಪಿಗಳು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ನೆಲೆಸಿದ್ದಾರೆ. ಈ ಹಿಂದೆಯೂ ಡ್ರಗ್ ಮಾರಾಟ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa