ಬಳ್ಳಾರಿ, 04 ಮಾರ್ಚ್ (ಹಿ.ಸ.):
ಆ್ಯಂಕರ್ : ನಾಡಿನ ಪ್ರಸಿದ್ಧ ಗೂಳ್ಯಂ ಗಾದಿಲಿಂಗಪ್ಪ ತಾತನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಂಧ್ರದ ನೇಮಕಲ್ ಗ್ರಾಮದಲ್ಲಿ ಪಾದಯಾತ್ರೆಯಲ್ಲಿ ಹೊರಟಿದ್ದ ನಾಲ್ವರಲ್ಲಿ ಇಬ್ಬರ ಮೇಲೆ ಸಿರಿವಾರ ಕ್ರಾಸ್‍ಬಳಿ ಬೊಲೇರೋ ವಾಹನ ಡಿಕ್ಕಿ ಹೊಡೆದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತರು ನೇಮಕಲ್ ಗ್ರಾಮದ ನಿವಾಸಿಗಳಾದ ನಾಗರಾಜ (19) ಮತ್ತು ಗಣೇಶ (18). ಮೋಕಾ ಗ್ರಾಮದ ನಿವಾಸಿಯ ಬೊಲೇರೋ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ, ಪಾದಯಾತ್ರಿಗಳ ಮೇಲೆ ಹರಿದ ಕಾರಣ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಗೂಡ್ಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್