ಬೆಳೆ ಸಮೀಕ್ಷೆ ಸಂದರ್ಭದಲ್ಲಿ ನಿಖರತೆ ನಮೂದಿಸಲು ಸಲಹೆ
ದಾವಣಗೆರೆ, 05 ಮಾರ್ಚ್ (ಹಿ.ಸ.) : ಆ್ಯಂಕರ್ : ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾದರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯ
ಬೆಳೆ ಸಮೀಕ್ಷೆ ಸಂದರ್ಭದಲ್ಲಿ ನಿಖರತೆ ನಮೂದಿಸಲು ಸಲಹೆ


ದಾವಣಗೆರೆ, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾದರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯಲ್ಲಿ 545 ಎಕರೆ ಟೊಮೆಟೊಗೆ ವಿಮೆ ಪಾವತಿಸಿದ್ದು ವಾಸ್ತವದಲ್ಲಿ 11.23 ಎಕರೆ ಟೊಮೆಟೊ ಬೆಳೆ ಬೆಳೆಯಲಾಗಿದೆ ಎಂದರು.

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿಳಿಚೋಡು ಹೋಬಳಿಯ ಅಸಗೋಡು ಗ್ರಾಮದಲ್ಲಿ ಟೊಮೆಟೊ ಬೆಳೆಗೆ ರೈತರು ಬೆಳೆ ವಿಮಾ ಕಂತನ್ನು ಪಾವತಿಸಿದ್ದು, ಅಕ್ರಮವಾಗಿ ಬೆಳೆ ಸಮೀಕ್ಷೆ ಆಪ್‍ನಲ್ಲಿ ಟೊಮೆಟೊ ಬೆಳೆಯನ್ನು ಖಾಸಗಿ ನಿವಾಸಿಗಳ ನೆರವಿನಿಂದ ದಾಖಲಿಸಲಾಗಿದೆ. ಸಾಂಪ್ರದಾಯಿಕವಾಗಿ ಬೆಳೆಯಲ್ಪಡುವ ವಿಸ್ತೀರ್ಣಕ್ಕಿಂತಲೂ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆ ಮಾಹಿತಿ ದಾಖಲಾಗಿದ್ದರಿಂದ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಭೌತಿಕವಾಗಿ 307 ಪ್ಲಾಟ್ ಗಳನ್ನು ಪುನರ್ ಪರಿಶೀಲಿಸಿದಾಗ ಕೇವಲ 13 ಪ್ಲಾಟುಗಳಲ್ಲಿ ಟೊಮೆಟೊ ಬೆಳೆದಿರುವುದು ಕಂಡು ಬಂದಿದೆ. 545 ಎಕರೆ ಪ್ರದೇಶಕ್ಕೆ ಬೆಳೆ ವಿಮಾ ಕಂತನ್ನು ಪಾವತಿಸಲಾಗಿದ್ದು, ಕೇವಲ 11.23 ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆ ಕಂಡುಬಂದಿದೆ ಎಂದರು.

ಬೆಳೆ ಸಮೀಕ್ಷೆಯನ್ನು ಮಾಡುವಾಗ ಅಥವಾ ಮಾಡಿಸುವಾಗ ಕಡ್ಡಾಯವಾಗಿ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ಪ್ರಲೋಭನೆಗೆ ಒಳಗಾಗದೇ ತಾವು ನಿಖರವಾಗಿ ಬೆಳೆದ ಬೆಳೆಯನ್ನು ದಾಖಲಿಸಬೇಕು. ಯಾರಾದರೂ ತಪ್ಪು ಮಾಹಿತಿ ನೀಡಲು ಆಮಿಷವೊಡ್ಡಿದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande