ನವದೆಹಲಿ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಭಾರತದ ಕಲೆಗಳ ವೈವಿಧ್ಯತೆಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ನಾಳೆ ರಾಷ್ಟ್ರಪತಿ ಭವನದಲ್ಲಿ ಚಾಲನೆ ದೊರೆಯಲಿದೆ. ಈ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ಈ ಉತ್ಸವವು ಮಾರ್ಚ್ 6 ರಿಂದ 9 ರವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ಈ ಉತ್ಸವಕ್ಕೆ ಪ್ರವೇಶ ಉಚಿತವಾಗಿದೆ. ಉತ್ಸವದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಸಾಂಪ್ರದಾಯಿಕ ಕರಕುಶಲ ವಸ್ತುಗಳು ಮತ್ತು ಕೈಮಗ್ಗ ವಸ್ತು ಪ್ರದರ್ಶನ ಹಾಗೂ ದಕ್ಷಿಣ ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa