ಬೆಂಗಳೂರು, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಓಲೈಕೆ ರಾಜಕಾರಣಕ್ಕೆ ಕಟ್ಟುಬಿದ್ದು ಪರಿಶಿಷ್ಟರಿಗೆ ದ್ರೋಹ ಬಗೆದಿದೆ.ಈ ನಿಟ್ಟಿನಲ್ಲಿ ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ನ್ಯಾಯ ಒದಗಿಸುವ ವರೆಗೆ ಬಿಜೆಪಿ ಹೋರಾಟ ನಿರಂತರವಾಗಿ ನಡೆಸಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa