ಕೊಪ್ಪಳ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2022-23 ಮತ್ತು 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2024ರ ಸೆಪ್ಟೆಂಬರ್ 12 ರಂದು ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ 2022-23 ಮತ್ತು 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಎಲ್ಲಾ ಯೋಜನೆಗಳಿಗೆ ನಿಗದಿಪಡಿಸಿದ ಭೌತಿಕ ಗುರಿಗಳಿಗನುಸಾರವಾಗಿ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಸಂಬಂಧಿಸಿದ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ತಾಲೂಕಾ ಕಛೇರಿ ಮತ್ತು ಉಪನಿರ್ದೇಶಕರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳದ ಕಛೇರಿಯ ನೋಟೀಸ್ ಬೋರ್ಡ್‍ಗೆ ಅಂಟಿಸಲಾಗಿರುತ್ತದೆ.
ಆಯ್ಕೆಯಾದ ಫಲಾನುಭವಿಗಳು ಸಂಬಂಧಿಸಿದ ತಾಲೂಕು ಕಚೇರಿಗಳಿಗೆ ಭೇಟಿ ನೀಡಿ ಸೂಕ್ತ ದಾಖಲಾತಿಗಳನ್ನು ತಮಗೆ ಸಂಬಂಧಿಸಿದ ತಾಲೂಕು ಕಚೇರಿಗಳಿಗೆ ಸಲ್ಲಿಸಬೇಕು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್