ಕೊಪ್ಪಳ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಡಿವಾಳ ಸಮಾಜವು ಉನ್ನತ ಮಟ್ಟದ ಸ್ಥಾನ ತಲುಪಬೇಕಾದರೆ, ಶ್ರೀ ಮಡಿವಾಳ ಮಾಚಿದೇವರು ಹಾಕಿ ಕೊಟ್ಟಿರುವ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಕೆ ಮಾಡಿಕೊಂಡಾಗ ಮಾತ್ರ ಸಾಧ್ಯವಾಗಿದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ ಪಟೇಲ್ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಡಿವಾಳ ಮಾಚಿದೇವ ರವರು 12ನೇ ಶತಮಾನದಲ್ಲಿ ಬಿಜಾಪುರ ಜಿಲೆಯ ಸಿಂಧಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ ಮತ್ತು ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣನಾಗಿ ಜನಿಸಿದರು. ಮಡಿವಾಳ ಮಾಚಿದೇವ ಕನ್ನಡದ ಶಿವಶರಣರಲ್ಲಿಯೆ ಅತ್ಯಂತ ಹಿರಿಯರು. ಬಸವಣ್ಣನವರು ಕಾಲ್ಯಾಣದಲ್ಲಿ ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ, ಸ್ವಾಗತಿಸುವ ಕೆಲಸ ಅವರದಾಗಿತ್ತು. ಅವರು ಕೇವಲ ಬಟ್ಟೆಯ ಮೇಲೆನಿ ಮೈಲಿಗೆಯನ್ನ ತೋಳೆಯದೇ, ಅದ್ಭುತ ವಚನಗಳ ಮೂಲಕ ಮನಸ್ಸಿಗೆ ಅಂಟಿಕೊಂಡಿರುವ ಕೋಳೆಯನ್ನ ತೋಳೆಯು ಕಾಯಕ ಮಾಡಿದರು. ಅವರು ರಚಿಸಿರುವ ವಚನಗಳಲ್ಲಿ 300 ವಚನಗಳು ದೊರಕಿವೆ ಎಂದರು.
ಮಡಿವಾಳ ಸಮಾಜದವರು ಎಲ್ಲಾ ಸಮಾಜದ ಭಾಂಧವರೊಂದಿಗೆ ಉತ್ತಮ ಸಂಬಂಧದೊಂದಿಗೆ ಇತರರ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕಾದರೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ನಗರಸಭೆ ವತಿಯಿಂದ ತಮ್ಮ ಯಾವುದೇ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಳ ಕುರಿತು ಮನವಿ ಇದ್ದಲ್ಲಿ ನಾನು ಅದನ್ನ ಸ್ವೀಕರಿಸಿ ಅನುದಾನವನ್ನು ಬಿಡುಗಡೆ ಮಾಡುತ್ತೆನೆ. ತಮಗೆಲ್ಲರಿಗೂ ಮಡಿವಾಳ ಮಾಚಿದೇವ ಜಯಂತಿ ಶುಭಾಶಯಗಳು ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಚಿತ್ರದುರ್ಗ ಸಂಸ್ಥಾನ ಮಠದ ಶ್ರೀ ಜಗದ್ಗುರು ಡಾ. ಬಸವ ಮಾಚಿದೇವ ಸ್ವಾಮಿಜಿ ಅವರು ಮಾತನಾಡಿ, ಕಾಯಕ ಮತ್ತು ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡುವುದರ ಮೂಲಕ ಕಾಯಕ ಯೋಗಿ ಎನಿಸಿಕೊಂಡವರು ಶ್ರೀ ಮಡಿವಾಳ ಮಾಚಿದೇವರು. ಅವರ ಬದುಕಿನ ಚಿಂತನೆಗಳನ್ನು ನಾವು ತಿಳಿದುಕೊಳ್ಳಬೇಕು ಮತ್ತು ಇತರರಿಗೂ ತಿಳಿಸಬೇಕು. ಮಡಿವಾಳ ಮಾಚಿದೇವ ಅವರು ತಮ್ಮ ಕಾಯಕ ಮತ್ತು ವಚನಗಳ ಮೂಲಕ, ಸಮಸ್ತ ಮಾನವ ಕುಲಕ್ಕೆ ಆದರ್ಶವಾಗಿದ್ದಾರೆ. ಅದಕ್ಕೆ ಒಂದು ನಿದರ್ಶನ ಎಂದರೆ ಇವತ್ತು ಮೆರವಣಿಗೆ ಸಮಯದಲ್ಲಿ ಮುಸ್ಲಿಂ ಸಮುದಾಯದ ಯುವಕರು, ಕುಂಬ ಹೊತ್ತ ಹೆಣ್ಣು ಮಕ್ಕಳಿಗೆ ನೀರು ಮತ್ತು ಮಜ್ಜಿಗೆ ಕೊಡುತ್ತಿರುವ ದೃಶ್ಯ ಸಾಕಲ್ಲವೆ. ಮಡಿವಾಳ ಮಾಚಿದೇವರ ತತ್ವ ವಿಶ್ವಕ್ಕೆ ಸಾರುವಂತದ್ದು ಎಂದರು.
ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಬೆಳಕನ್ನು ನೀಡಿದ್ದಾರೆ. ಅಂತಹ ಮಹನೀಯರುಗಳಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ವಿಶಿಷ್ಟ ವಚನಕಾರರಾಗಿ ರೂಪುಗೊಂಡವರು ಮಹಾನ್ ಶರಣ ಶ್ರೀ ಮಡಿವಾಳ ಮಾಚಿದೇವರು. ಜಯಂತಿ ಆಚರಣೆಯ ಜೊತೆಗೆ, ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಯಂತಿ ಆಚರಣೆಯಿಂದ ನಮ್ಮ ಜೀವನ ಶೈಲಿಯನ್ನು ಬದಾಲಿಸಿಕೋಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ನವೀನ್ ಕುಮಾರ್ ಬಿ. ಅವರು ಶ್ರೀ ಮಡಿವಾಳ ಮಾಚಿದೇವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಡಿವಾಳ ಸಮಾಜದ ಪ್ರಮುಖಕರಾದ ಯೋಗೇಶ್ ಮಡಿವಾಳರ ಹಿಟ್ನಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಕೊಪ್ಪಳ ನಗರಸಭೆ ಸ್ತಾಯಿ ಸಮಿತಿ ಅಧ್ಯಕ್ಷರಾದ ಅಕ್ಬರಪಾಶ ಪಲ್ಟನ್, ನಗರ ಸಭೆ ಸದಸ್ಯರಾದ ಅಜೀಮುದ್ದಿನ್ ಅತ್ತಾರ್, ಅರುಣ್ ಶೆಟ್ಟಿ, ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಉದ್ಯಮಿ ಸೋಮಶೇಖರ್ ಹಿಟ್ನಾಳ್, ಸಲಿಮ್ ಅಳವಂಡಿ ಹಾಗೂ ಮಡಿವಾಳ ಸಮಾಜದ ಮುಖಂಡರಾದ ಕೃಷ್ಣ ಎಸ್. ಮಡಿವಾಳ ಸಮಾಜದ ಎಮ್.ಕೆ.ಹನುಮಂತಪ್ಪ, ಶಂಕ್ರಪ್ಪ ಹಾಲ್ಕೆರಿ, ರಾಮಣ್ಣ ಮಡಿವಾಳರ, ಬಸವರಾಜ ಬೆಳಗಲಿ, ದುರಗೇಶ ಮಡಿವಾಳರ, ಹುಲಗಪ್ಪ ಜಿ. ಮಡಿವಾಳರ, ಡಾ. ಸಂಗಮೇಶ ಕಲಹಾಳ, ಮಂಜುಳಾ ಮಲ್ಲಿಕಾರ್ಜುನ ಮಡಿವಾಳರ, ಕನಕಪ್ಪ ಹೋನ್ನಪ್ಪ ಮಡಿವಾಳರ, ಶಂಕ್ರಪ್ಪ ಮಡಿವಾಳರ, ಯಮನೂರಪ್ಪ ಬುಡ್ಡಪ್ಪ ಮಡಿವಾಳರ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅದ್ದೂರಿ ಮೇರವಣಿಗೆ: ಶ್ರೀ ಮಡಿವಾಳ ಮಾಚಿದೇವ ಜಯಂತಿ ನಿಮಿತ್ತ ಮಡಿವಾಳ ಮಾಚಿದೇವ ಭಾವಚಿತ್ರದ ಮೆರವಣಿಗೆಗೆ ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಚಾಲನೆ ನೀಡಿದರು.
ಮೆರವಣಿಗೆಯು ನಗರದ ಕೋಟೆ ರಸ್ತೆಯ ಶ್ರೀ ಅಕ್ಕಮಹಾದೇವಿ ದೇವಾಲಯದಿಂದ ಪ್ರಾರಂಭಗೊಂಡು, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಅಶೋಕ ಸರ್ಕಲ್ ಬಳಿಯ ಸಾಹಿತ್ಯ ಭವನದವರೆಗೆ ಅದ್ದೂರಿಯಾಗಿ ನಡೆಯಿತು. ಈ ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕುಂಭ ಹೊತ್ತು ಸರತಿ ಸಾಲಿನಲ್ಲಿ ನಡೆಯುತ್ತಿರುವುದು ವಿಶೇಷವಾಗಿತ್ತು. ಮಡಿವಾಳ ಸಮಾಜದವರು ಸೇರಿದಂತೆ ಹಲವಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್