ಧಾರವಾಡ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ರೋಜ್‍ಗಾರ್-ಉದ್ಯೋಗ ಮೇಳವನ್ನು ಮಾರ್ಚ್ 9, ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಉದ್ಯೋಗಮೇಳದ ಉದ್ಘಾಟನಾ ಸಮಾರಂಭವನ್ನು ಡಾ.ಅಣ್ಣಾಜಿರಾವ ಶಿರೂರು (ಸೃಜನಾ) ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa