ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳ ಪರಿಪಕ್ವ ಮೊತ್ತ ಮಂಜೂರು
ಬೆಂಗಳೂರು, 05 ಮಾರ್ಚ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 3302 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ
ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳ ಪರಿಪಕ್ವ ಮೊತ್ತ ಮಂಜೂರು


ಬೆಂಗಳೂರು, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 3302 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳನ್ನು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಿನಿ ವಿಧಾನ ಸೌಧ ಯಲಹಂಕ, ಬೆಂಗಳೂರು ಉತ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 080-28462513 ಮೂಲಕ ಸಂಪರ್ಕಿಸಬಹುದು ಎಂದು ಯಲಹಂಕ ಬೆಂಗಳೂರು ಉತ್ತರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande