ಸರಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ; ಅಶೋಕ ಆಕ್ರೋಶ
ಬೆಂಗಳೂರು, 05 ಮಾರ್ಚ್ (ಹಿ.ಸ.) : ಆ್ಯಂಕರ್ : ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವವೇ ಸರ್ಕಾರದ ಮುಂದಿಲ್ಲ ಎಂದು 4 ತಿಂಗಳ ಹಿಂದೆಯಷ್ಟೇ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸದ್ದಿಲ್ಲದೆ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಸೂದೆ ಸಿದ್ಧಪಡಿಸಿ ತರಾತುರಿಯಲ್
Ashok


ಬೆಂಗಳೂರು, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವವೇ ಸರ್ಕಾರದ ಮುಂದಿಲ್ಲ ಎಂದು 4 ತಿಂಗಳ ಹಿಂದೆಯಷ್ಟೇ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸದ್ದಿಲ್ಲದೆ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಸೂದೆ ಸಿದ್ಧಪಡಿಸಿ ತರಾತುರಿಯಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಿ ಪ್ರಸ್ತುತ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆ ಮಾಡುವ ಹೊಂಚು ಹಾಕಿದ್ದಾರೆ ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಧರ್ಮ ಆಧಾರಿತ ಮೀಸಲಾತಿಗೆ ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ವಿರೋಧ ವ್ಯಕ್ತಪಡಿಸಿದ್ದರು. ನಮ್ಮ ಸಂವಿಧಾನದಲ್ಲೂ ಸಹ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಆದರೂ ಹಠಕ್ಕೆ ಬಿದ್ದಂತೆ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡಲು ಸರಕಾರ ಮುಂದಾಗಿರುವುದು ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣಕ್ಕೆ ಸಾಕ್ಷಿ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande