ಬೆಂಗಳೂರು, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ನಿರಂತರ ಜ್ಯೋತಿ ಯೋಜನೆ ಮೂಲಕ ದಿನದ 7 ಗಂಟೆ 3 ಫೇಸ್ ಹಾಗೂ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa