ಬಳ್ಳಾರಿ ಮಹಾನಗರಪಾಲಿಕೆ : ನೀರು ಸರಬರಾಜು ಸಿಬ್ಬಂದಿ ಮುಷ್ಕರ ಹಿಂದಕ್ಕೆ
ಬಳ್ಳಾರಿ, 05 ಮಾರ್ಚ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಂಡ ರೀತಿಯಲ್ಲಿಯೇ ತಮ್ಮ ಸೇವೆಯನ್ನು ಖಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ನಗರ ನೀರು ಸರಬರಾಜು ಸಿಬ್ಬಂದಿ ಬುಧವಾರ ಮುಷ್ಕರವನ್ನು ಹಿಂದಕ್
ಬಳ್ಳಾರಿ ಮಹಾನಗರಪಾಲಿಕೆ : ನೀರು ಸರಬರಾಜು ಸಿಬ್ಬಂದಿ ಮುಷ್ಕರ ಹಿಂದಕ್ಕೆ


ಬಳ್ಳಾರಿ, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಂಡ ರೀತಿಯಲ್ಲಿಯೇ ತಮ್ಮ ಸೇವೆಯನ್ನು ಖಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ನಗರ ನೀರು ಸರಬರಾಜು ಸಿಬ್ಬಂದಿ ಬುಧವಾರ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ.

ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಮತ್ತು ಪಾಲಿಕೆಯ ಅಧಿಕಾರಿಗಳು, ಮುಷ್ಕರ ನಿರತರನ್ನು ಭೇಟಿ ಮಾಡಿ, ಮುಷ್ಕರ ನಿರತರ ಜೊತೆ ಮಾತನಾಡಿದ ನಂತರ, ನೀರು ಸರಬರಾಜು ಗುತ್ತಿಗೆ ನೌಕರರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande