ಮಸ್ಕಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆಸಲಾಗಿದ್ದ ಆರೋಪಿ ಪರಾರಿಯಾಗಿದ್ದಾನೆ! ಈ ಆಘಾತಕಾರಿ ಘಟನೆ ಗುರುವಾರ ನಡೆದಿದ್ದು,ದೊಡ್ಡ ದುರುಗಪ್ಪ
ಹಸಮುಕಲ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಮಸ್ಕಿ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಪೊಲೀಸರ ಕಣ್ಗಾವಲಿನಿಂದ ತಪ್ಪಿಸಿಕೊಂಡಿದ್ದಾನೆ.
ಬಳಗಾನೂರ ಪೊಲೀಸ್ ಠಾಣೆ ಹಾಗೂ ಮಸ್ಕಿ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅಧಿಕಾರಿಗಳ ಸಮ್ಮುಖದಲ್ಲಿ ಪರಾರಿಯಾಗಿದ್ದಾನೆ.
ಜನಸಂದಣಿಯ ನಡುವೆ ಪೊಲೀಸರು ದಿಗ್ಭ್ರಮೆಗೊಂಡರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅಧಿಕಾರಿಗಳು,ಅವನನ್ನು ಬಂಧಿಸಲು ವಿಳಂಬವಿಲ್ಲದೆ ವ್ಯಾಪಕ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ