ಬೆಂಗಳೂರು, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಳಪೆ ಔಷಧ ಪೊರೈಕೆ ಮಾಡಿದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa