ಬಳ್ಳಾರಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸಲ್ಲಿಸಿದ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೇ ಇರುವ ಕುರಿತು ವಿಮಾ ಸಂಸ್ಥೆಯವರಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆ ಹಾಗೂ ಕುರುಗೋಡು ತಾಲ್ಲೂಕಿನಲ್ಲಿ 3 ಪ್ರಸ್ತಾವನೆ ತಿರಸ್ಕøತಗೊಂಡಿರುತ್ತವೆ. ತಿರಸ್ಕøತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಹಾಗಾಗಿ ರೈತರು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬೇಕು. ಮುಂದುವರೆದು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧು ಎಂದು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್