ಕನಕಗಿರಿ ಉತ್ಸವ : ಕಲಾತಂಡಗಳಿಂದ ಅರ್ಜಿ ಆಹ್ವಾನ
ಕೊಪ್ಪಳ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ಕನಕಗಿರಿ ಉತ್ಸವವು ಮಾರ್ಚ್ 20 ಮತ್ತು 21 ರಂದು ನಡೆಯಲಿದ್ದು, ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು
ಕನಕಗಿರಿ ಉತ್ಸವ : ಕಲಾತಂಡಗಳಿಂದ ಅರ್ಜಿ ಆಹ್ವಾನ


ಕೊಪ್ಪಳ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ಕನಕಗಿರಿ ಉತ್ಸವವು ಮಾರ್ಚ್ 20 ಮತ್ತು 21 ರಂದು ನಡೆಯಲಿದ್ದು, ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕನಕಗಿರಿ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು ಮತ್ತು ಕಲಾತಂಡಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕನಕಗಿರಿ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಆಸಕ್ತ ಕಲಾವಿದರು ಮತ್ತು ಕಲಾತಂಡಗಳು ತಮ್ಮ ಸ್ವ-ವಿವರಗನ್ನು ಹಾಗೂ ಕಲಾಪ್ರದರ್ಶನದ ವಿವರಗಳನ್ನೊಳಗೊಂಡ ದಾಖಲೆಗಳು ಮತ್ತು ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಮಾರ್ಚ್ 10 ರ ಸಂಜೆ 6 ಗಂಟೆಯೊಳಗಾಗಿ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ, ಇವರ ಕಛೇರಿಗೆ ಸಲ್ಲಿಸುವಂತೆ ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande