ಲಂಡನ್, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಭಾರತದ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ಮಾಡಲು ಯತ್ನಿಸಿದ್ದಾರೆ.
ಲಂಡನ್‌ನ ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜೈಶಂಕರ್ ಅವರನ್ನು ಸುತ್ತುವರೆದು ದಾಳಿ ಮಾಡಲು ಪ್ರಯತ್ನಿಸಿದ್ದಾರೆ.
ಈ ಘಟನೆಯ ದೃಶ್ಯಾವಳಿಗಳು ಎಕ್ಸ ಜಾಲತಾಣದಲ್ಲಿ ಹರಿದಾಡುತ್ತಿವೆ. ಖಲಿಸ್ತಾನಿ ಬೆಂಬಲಿಗರ ಗುಂಪು ಕೈಯಲ್ಲಿ ಖಲಿಸ್ತಾನಿ ಧ್ವಜಗಳನ್ನು ಹಿಡಿದು ಘೋಷಣೆ ಹಾಕುತ್ತಿರುವುದು ಕಂಡು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa