ಆಯುಷ್ಮಾನ್ ಭಾರತ್ ಚಿಕಿತ್ಸಾ ವೆಚ್ಚ : ರಾಜ್ಯ ಸರಕಾರದ ಸಿಂಹ ಪಾಲು-ಗುಂಡೂರಾವ್
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸ
Gundurao


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40 ರಷ್ಟು ಅನುದಾನವನ್ನು ಒದಗಿಸಬೇಕು. ಆದರೆ ಕರ್ನಾಟಕದಲ್ಲಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ 75 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದೆ ಎಂದರು.

ಕೇಂದ್ರ ಸರ್ಕಾರ ಕೇವಲ ಶೇ 25 ರಷ್ಟು ಅನುದಾನ ನೀಡುತ್ತಿದೆ. ಇನ್ನು ಯೋಜನೆಯಡಿ ಚಿಕಿತ್ಸಾ ವೆಚ್ಚಗಳು 2018 ರಿಂದ ಪರಿಷ್ಕರಣೆ ಆಗಿಲ್ಲ.‌ ಪರಿಷ್ಕರಣೆಗೆ ಮುಂದಾದರೆ ಯೋಜನೆಗೆ ರಾಜ್ಯ ಸರ್ಕಾರವೇ ಶೇ 90 ರಷ್ಟು ಅನುದಾನ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಅನುದಾನದ ಪಾಲು ಶೇ 10 ಕ್ಕೆ ಬಂದು ನಿಲ್ಲಲಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande