ಮಾ.09 ರಂದು ಬಳ್ಳಾರಿ ಪೊಲೀಸ್ ರನ್
ಬಳ್ಳಾರಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ರನ್-2025 ಕಾರ್ಯಕ್ರಮ ಅಂಗವಾಗಿ ‘ನಮ್ಮ ನಮ್ಮೆಲ್ಲರ ಸದೃಢತೆ, ಡ್ರಗ್ಸ್ ಮುಕ್ತ ಕರ್ನಾಟಕ’ ನಿರ್ಮಾಣಕ್ಕಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಮಾ.09 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಬ
ಮಾ.09 ರಂದು ಬಳ್ಳಾರಿ ಪೊಲೀಸ್ ರನ್


ಬಳ್ಳಾರಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ರನ್-2025 ಕಾರ್ಯಕ್ರಮ ಅಂಗವಾಗಿ ‘ನಮ್ಮ ನಮ್ಮೆಲ್ಲರ ಸದೃಢತೆ, ಡ್ರಗ್ಸ್ ಮುಕ್ತ ಕರ್ನಾಟಕ’ ನಿರ್ಮಾಣಕ್ಕಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಮಾ.09 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಬಳ್ಳಾರಿ ಪೊಲೀಸ್ ರನ್-2025 ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವಿಜೇತರಿಗೆ ಆಕರ್ಷಕ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ತಿಳಿಸಿದ್ದಾರೆ.

ಓಟವು ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹೆಚ್.ಆರ್.ಗವಿಯಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ವಾಲ್ಮೀಕಿ(ಎಸ್.ಪಿ) ವೃತ್ತ, ತಾಳೂರು ರಸ್ತೆ ಕ್ರಾಸ್ ಮೂಲಕ ಮರಳಿ ಕನಕದುರ್ಗಮ್ಮ ದೇವಸ್ಥಾನ ಆವರಣದವರೆಗೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande