ಬೆಂಗಳೂರು, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯದಾದ ಮರಣ ಪ್ರಮಾಣಪತ್ರವನ್ನು ಕಂದಾಯ ಇಲಾಖೆ ಸಿಬ್ಬಂದಿ ಕೇಳುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ತುರ್ತಾಗಿ ಸರಳೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದ್ದಾರೆ.
ಅರ್ಜಿದಾರರಿಂದ ಛಾಪಾ ಕಾಗದದ ಮೇಲೆ ವಂಶವೃಕ್ಷದ ಮಾಹಿತಿ ಪಡೆದು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ದಾಖಲೆ ಪರಿಶೀಲಿಸಿ ಉಪ ತಹಸೀಲ್ದಾರರ ಮೂಲಕ ದೃಢೀಕರಿಸಿ, ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa