ಗದಗ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಸರಕಾರಿ ಶಾಲೆಗಳಲ್ಲಿ ಸಮುದಾಯದ ಸಹಭಾಗಿತ್ವದಿಂದಾಗಿ ಮಕ್ಕಳ ಕಲಿಕೆಗೆ ಹಾಗೂ ಶೈಕ್ಷಣಿಕ ವಾತಾವರಣಕ್ಕೆ ಪೂರಕವಾದಂತಹ ವಾತಾವರಣಯಿದ್ದು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಾಯಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎನ್ ನಾಯ್ಕ ಅವರು ಹರ್ಷ ವ್ಯಕ್ತಪಡಿಸಿದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿದ ಸೂರಣಗಿ ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಕಲಿಕಾ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲೆಗಳ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಥಳೀಯ ಆಡಳಿತದ ಸಂಸ್ಥೆಗಳು ಸಮನ್ವಯ ಸಾಧಿಸಿ ಕಲಿಕೆಯನ್ನು ಪ್ರೋತ್ಸಾಹಿಸುವುದು ಇತರ ಗ್ರಾಮಗಳಿಗೂ ಮಾದರಿಯಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Lalita MP