ಬಳ್ಳಾರಿ : ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ ಪಟ್ಟಾಭಿಷೇಕ
ಬಳ್ಳಾರಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ ಪಟ್ಟಾಭಿಷೇಕ ಹಾಗೂ ವಧರ್ಂತಿ ಮಹೋತ್ಸವದ ಅಂಗವಾಗಿ ಬಳ್ಳಾರಿಯ ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮಿ ಮಠ, ತೇರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ವಿವಿಧ ಪೂಜೆಗಳು ವಿಜೃಂಭಣೆಯಿಂದ ನಡೆ
ಬಳ್ಳಾರಿ : ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ ಪಟ್ಟಾಭಿಷೇಕ


ಬಳ್ಳಾರಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ ಪಟ್ಟಾಭಿಷೇಕ ಹಾಗೂ ವಧರ್ಂತಿ ಮಹೋತ್ಸವದ ಅಂಗವಾಗಿ ಬಳ್ಳಾರಿಯ ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮಿ ಮಠ, ತೇರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ವಿವಿಧ ಪೂಜೆಗಳು ವಿಜೃಂಭಣೆಯಿಂದ ನಡೆದವು.

ಗುರುವಾರ ಬೆಳಗ್ಗೆ ವಿಶೇಷ ಪೂಜೆ, ಅರ್ಚನೆ, ವಿಶೇಷ ಅಲಂಕಾರ, ಮಹಾನೈವೇದ್ಯ, ಮಹಾ ಮಂಗಳಾರತಿ ಸೇರಿ ವಿವಿಧ ಪೂಜೆಗಳು ಶ್ರದ್ಧೆ ಮತ್ತು ಭಕ್ತಿಯಿಂದ ವಿಜೃಂಭಣೆಯಿಂದ ನಡೆದವು.

ಶ್ರೀ ರಾಘವೇಂದ್ರ ಸಪ್ತಾಹ ಮಹೋತ್ಸವದ ಹಿನ್ನೆಲೆಯಲ್ಲಿ ಸತ್ಯನಾರಾಯಣ ಪೇಟೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾರ್ಚ್ 1 ರಿಂದ 6 ರ ವರೆಗೆ ನಿತ್ಯ ಸಂಜೆ 5.30 ರಿಂದ ಶ್ರೀಮಠ ಹಾಗೂ ಶ್ರೀ ಮಧ್ವ ಸಂಘದ ಆಶ್ರಯದಲ್ಲಿ ವಿವಿಧ ಪಂಡಿತರಿಂದ ಶ್ರೀ ರಾಘವೇಂದ್ರ ವಿಜಯ ಪ್ರವಚನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande