ಒಣ ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ : ರೈತರ ಪ್ರತಿಭಟನೆ
ಬಳ್ಳಾರಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಮೂವತ್ತು ಸಾವಿರ ಎಕರೆ ಪ್ರದೇಶದಲ್ಲಿ ರೈತರು ಒಣ ಮೆಣಸಿನಕಾಯಿಯನ್ನು ಬೆಳೆಯುತ್ತಿದ್ದು ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು ಮತ್ತು ಅತ್ಯಾಧುನಿಕ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಬೇಕು ಎಂದು ರೈತರು ನಗರದಲ್ಲಿ ಗುರುವಾರ
ಒಣ ಮೆಣಸಿನಕಾಯಿ ಬೆಳೆಗೆ ಬೆಂಬಲಬೆಲೆ ಘೋಷಿಸಿ : ರೈತರ ಪ್ರತಿಭಟನೆ


ಬಳ್ಳಾರಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಮೂವತ್ತು ಸಾವಿರ ಎಕರೆ ಪ್ರದೇಶದಲ್ಲಿ ರೈತರು ಒಣ ಮೆಣಸಿನಕಾಯಿಯನ್ನು ಬೆಳೆಯುತ್ತಿದ್ದು ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು ಮತ್ತು ಅತ್ಯಾಧುನಿಕ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಬೇಕು ಎಂದು ರೈತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಕಳೆದ ವರ್ಷ ಪ್ರತಿ ಕ್ವಿಂಟಾಲ್‍ಗೆ 14 ರಿಂದ 15 ಸಾವಿರ ರೂಪಾಯಿ ಬೆಲೆ ಇದ್ದ ಒಣ ಮೆಣಸಿನಕಾಯಿ ಬೆಲೆ ಈಗ 7 ರಿಂದ 8 ಸಾವಿರಕ್ಕೆ ಕುಸಿದಿದೆ. ಬೆಲೆ ಕುಸಿತದಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ, ಜೀವನವೇ ಕಷ್ಟಕರವಾಗಿದೆ ಎನ್ನುತ್ತಿದ್ದಾರೆ. ಕಾರಣ ಸಂಕಷ್ಟದಲ್ಲಿರುವ ರೈತರನ್ನು ಸಂರಕ್ಷಿಸಲು ಸರ್ಕಾರ ತಕ್ಷಣವೇ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ನಗರದ ಹವಂಭಾವಿಯಿಂದ ಪ್ರಾರಂಭವಾದ ಪ್ರತಿಭಟನೆಯು ಜಿಲ್ಲಾಧಿಕಾರಿಗಳ ಕಚೇರಿಯನ್ನು ತಲುಪಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande