ಕೆ.ಸಿ ವ್ಯಾಲಿ ಹರಿಯುವ ಪ್ರದೇಶದಲ್ಲಿ ಬೆಳೆ ಪರೀಕ್ಷೆ
ಕೆ.ಸಿ ವ್ಯಾಲಿ ಹರಿಯುವ ಪ್ರದೇಶದಲ್ಲಿ ಬೆಳೆ ಪರೀಕ್ಷೆ
ಚಿತ್ರ: ಕೋಲಾರ ತಾಲ್ಲೂಕಿನ ತೂರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿಎನ್ ರವಿ ಅವರ ತೋಟಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋಲಾರ, ಮಾರ್ಚ್ 0೬ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರು ಹರಿಯುತ್ತಿರುವ ಪ್ರದೇಶಗಳಲ್ಲಿ ಬೆಳೆಯುವ ಬೆಳೆಗಳನ್ನು ಪರೀಕ್ಷೆಗೆ ಒಳಪಡಿಸುವ ಸಲುವಾಗಿ ತಾಲ್ಲೂಕಿನ ಸುಗಟೂರು ಹೋಬಳಿಯ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ ತೋಟಕ್ಕೆ ಅಧಿಕಾರಿಗಳು ಭೇಟಿ ನೀಡಿದರು.

ಟೊಮೆಟೊ, ಬೀನ್ಸ್, ಕ್ಯಾಪ್ಸಿಕಂ, ಬದನೆಕಾಯಿ, ಕ್ಯಾರೆಟ್ ಬೆಳೆಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಬಾಬು, ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಅಧಿಕಾರಿ ರಾಜು, ಜಿಕೆವಿಕೆ ಪ್ರಾಧ್ಯಾಪಕ ಡಾ.ಬಿ.ಜಿ.ವಾಸಂತಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಶಿಕುಮಾರ್, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಪ್ರಗತಿಪರ ರೈತ ರವಿ ಹಾಗೂ ಸ್ಥಳೀಯ ರೈತರು ಇದ್ದರು.

ಚಿತ್ರ: ಕೋಲಾರ ತಾಲ್ಲೂಕಿನ ತೂರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿಎನ್ ರವಿ ಅವರ ತೋಟಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

 rajesh pande