ಬಳ್ಳಾರಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿರುವ ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ `ಗೃಹಲಕ್ಷ್ಮಿ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿದಿ' ಗ್ಯಾರೆಂಟಿü ಯೋಜನೆಗಳ ಅನುಷ್ಠಾನವನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಬಳ್ಳಾರಿ ಜಿಲ್ಲಾ ಜೆಡಿಎಸ್ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಜಿಲ್ಲಾ ಜೆಡಿಎಸ್ ಪಕ್ಷದ ಕಚೇರಿಯಿಂದ ಡಿಸಿ ಕಚೇರಿ ವರೆಗೆ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಬಿಡುಗಡೆಯಾಗಿಲ್ಲ. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಸಾಲಗಾರರು ಮತ್ತು ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಬ್ಯಾಂಕ್ ದರೋಡೆಗಳು, ಮಾದಕ ವಸ್ತುಗಳ ಮಾರಾಟ ಮತ್ತು ಸೈಬರ್ ಅಪರಾಧಗಳು ಯಥೇಚ್ಚಾವಾಗಿ ನಡೆಯುತ್ತಿವೆ. ಮೈಸೂರಿನಲ್ಲಿ ಕಿಡಿಗೇಡಿಗಳು ಪೆÇೀಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಶಾಂತಿಗೆ ಭಂಗ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಸಿರುಗುಪ್ಪ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಶಿವ ನಾರಾಯಣ, ಅಶೋಕ ಸಂಗನಕಲ್ಲು, ಮೇಘರಾಜ ಕಂಪ್ಲಿ, ಹೊನ್ನೂರು ಸ್ವಾಮಿ, ಮುತ್ತು, ರಾಮಾಂಜೀನಿ, ಬಸಪ್ಪ, ಪ್ರದೀಪ್, ಜಾವೀದ್, ಕಿರಣ್ ಕುಮಾರ್, ರುದ್ರಮುನಿ, ನಾಗರಾಜ್, ಬಸವ, ಜಮೀಲಾ ಬೇಗಂ, ಪುಷ್ಪಾ, ಭವಾನಿ, ವಿಜಯ, ವೃಂದಮ್ಮ, ರಾಜೇಶ್ವರಿ, ರಮಾದೇವಿ, ಭುವನೇಶ್ವರಿ, ನೀಲಾ, ನಾಗವೇಣಿ, ರೇಣುಕಾ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್