ಕೊಪ್ಪಳ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಹಕಾರದಲ್ಲಿ ``2024ರ ಕೆ.ಯು.ಡಬ್ಲ್ಯೂ.ಜೆ. ದತ್ತಿನಿಧಿ ಪ್ರಶಸ್ತಿ'' ಕಾರ್ಯಕ್ರಮವನ್ನು ಮಾರ್ಚ್ 9 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ನಗರದ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪ (ಪಾನಗಂಟಿ ಕಲ್ಯಾಣ ಮಂಟಪ ಪಕ್ಕ)ದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು `ಹಿರಿಯರ ನೆನಪಿನಂಗಳದಲ್ಲಿ' ಎಂಬ ಪುಸ್ತಕ ಬಿಡುಗಡೆ ಮಾಡುವರು.
ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿನಂದನ ನುಡಿಗಳನ್ನಾಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವರು. ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿಯವರು ಮೊದಲ ನುಡಿಗಳನ್ನಾಡುವರು. ಮಾಧ್ಯಮ ತಜ್ಞರು ಮತ್ತು ಬಹುರೂಪಿ ಪುಸ್ತಕಾಲಯದ ಪ್ರಕಾಶಕರಾದ ಜಿ.ಎನ್.ಮೋಹನ್ ಅವರು `ಹಿರಿಯರ ನೆನಪಿನಂಗಳದಲ್ಲಿ' ಎಂಬ ಪುಸ್ತಕದ ಕುರಿತು ಮಾತನಾಡುವರು.
ಅತಿಥಿಗಳಾಗಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ.ಕೆ.ರವಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್ ಅರಸಿದ್ದಿ ಅವರು ಭಾಗವಹಿಸುವರು.
ಕೆ.ಯು.ಡ.ಬ್ಲ್ಯೂ.ಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಸಮಿತಿ ಸದಸ್ಯ ಎಮ್.ಸಾದಿಕ್ ಅಲಿ, ವಿಶೇಷ ಆಹ್ವಾನಿತ ಸದಸ್ಯ ಎಚ್.ಎಸ್.ಹರೀಶ್ ಹಾಗೂ ಸಂಘದ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ನಾಗರಾಜ್ ಅವರು ಉಪಸ್ಥಿತರಿರುವರು. ಕೆ.ಯು.ಡಬ್ಲ್ಯೂ.ಜೆ. ದತ್ತಿ ನಿಧಿ ಪ್ರಶಸ್ತಿ ಮತ್ತು ಕೆ.ಯು.ಡಬ್ಲ್ಯೂ.ಜೆ. ವಿಶೇಷ ಪ್ರಶಸ್ತಿಗಳಿಗೆ ಭಾಜನರಾದ ಎಲ್ಲಾ ಮಹನೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರುಗಳಾದ ಪುಂಡಲೀಕ ಭೀ.ಬಾಕೋಜಿ, ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ಭವಾನಿಸಿಂಗ್ ಠಾಕೂರ್, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳ, ಸಂಘದ ಕೊಪ್ಪಳ ಜಿಲ್ಲಾ ಘಟಕದ ಜಿಲ್ಲಾ ಉಪಾಧ್ಯಕ್ಷರುಗಳಾದ ರುದ್ರಗೌಡ ಪಾಟೀಲ ಹಾಗೂ ವೆಂಕಟೇಶ ಕುಲಕರ್ಣಿ, ಕಾರ್ಯದರ್ಶಿಗಳಾದ ವೀರಣ್ಣ ಕಳ್ಳಿಮನಿ, ಚಾಂದಸಿಂಗ್ ಕಾರಟಗಿ ಹಾಗೂ ಮಂಜುನಾಥ ಅಂಗ, ಜಿಲ್ಲಾ ಖಜಾಂಚಿ ರಾಜು ಬಿ.ಆರ್., ಮತ್ತು ಐ.ಎಫ್.ಡಬ್ಲ್ಯೂ.ಜೆ ಸದಸ್ಯರಾದ ಜಿ.ಎಸ್.ಗೋನಾಳ ಹಾಗೂ ಜಿಲ್ಲಾ ಕಾರ್ಯಕಾರಣಿ ಸದಸ್ಯರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್