ಬೆಂಗಳೂರು, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಾರ್ಚ ೭ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲ್ಲಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು,
ಕಳೆದ ಕೆಲವು ದಿನಗಳಿಂದ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ,
ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ.
ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ.
ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ
ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa