ರಾಯಚೂರು, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ನ್ಯಾಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್08ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಆಗಿರುವ ಮತ್ತು ರಾಯಚೂರಿನ ಆಡಳಿತಾತ್ಮಕ ನ್ಯಾಯಾಧೀಶರಾದ ಉಮಾ ಎಂ.ಜಿ. ಅವರು ಉದ್ಘಾಟಿಸುವರು. ರಾಯಚೂರ ನ್ಯಾಯಾಲಯದ ಎಲ್ಲ ನ್ಯಾಯಾಧೀಶರು ಉಪಸ್ಥಿತರಿರುವರು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್