ಭೀಕರ ರಸ್ತೆ ಅಪಘಾತ ; ಒಂದೇ ಕುಟುಂಬದ ಆರು ಜನ ಸಾವು
ಸಿರೋಹಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರಸ್ತೆಯಲ್ಲಿ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿವರ್ಲಿ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವೇಗವಾಗಿ
Accident


ಸಿರೋಹಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರಸ್ತೆಯಲ್ಲಿ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿವರ್ಲಿ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವೇಗವಾಗಿ ಬಂದ ಕಾರು ಟ್ರಾಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು . ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande