ಕೋಲಾರ, ಮಾರ್ಚ್.೬ (ಹಿ.ಸ.)ಆಂಕರ್ :
ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅದರಲ್ಲಿ ಅತಿ ಮುಖ್ಯವಾದದ್ದು ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಪದ್ಮಯ ಹೇಳಿದರು.
ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಜಿನಗತಿಮ್ಮನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಭೂಮಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಭಾಗವಹಿಸಿ ಮಾತನಾಡಿದರು.
ಕೆರೆ ಅಭಿವೃದ್ಧಿ ಕೆಲಸವನ್ನು ಮಾಡಿದರೆ ಸುತ್ತಮುತ್ತಲಿನ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ ಹಾಗೂ ದನ ಕರುಗಳಿಗೆ ನೀರು ಕುಡಿಯಲು ಉಪಯೋಗವಾಗುತ್ತದೆ ಮತ್ತು ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಹಾಗೂ ಕೃಷಿ ಮಾಡುವ ರೈತರಿಗೆ ಅನುಕೂಲವಾಗಲಿದ್ದು, ಹಾಗೂ ಈ ಕೆರೆಯ ಮಣ್ಣನ್ನು ರೈತರು ತಮ್ಮ ಭೂಮಿಗೆ ಹಾಕಿದರೆ ಉತ್ತಮವಾದ ಇಳುವರಿ ಪಡೆಯಬಹುದು ಆದ್ದರಿಂದ ರೈತರೆಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು .
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೆ.ವೈ. ಈರಣ್ಣ ಗೌಡ , ತಾಲೂಕಿನ ಯೋಜನಾಧಿಕಾರಿ ಸತೀಶ್ ಹೆಚ್, ಹುಳದೇನಹಳ್ಳಿ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ತಾಲೂಕಿನ ಕೃಷಿ ಅಧಿಕಾರಿ ಮಧುರಾಜ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ, ಮೇಲ್ವಿಚಾರಕರಾದ ಕವಿತಾ, ಸಮಿತಿಯ ಉಪಾಧ್ಯಕ್ಷ ರಾಮಸ್ವಾಮಿ, ಮಂಜುನಾಥ್, ಮುನಿರಾಜ್, ಮುನಿಯಪ್ಪ, ಸೇವಾ ಪ್ರತಿನಿಧಿಗಳಾದ ಸರಳ, ವೆಂಕಟಮ್ಮ ,ಸುಮಾ, ಅಮೃತ್ ಹಾಗೂ ರೈತರು ಭಾಗವಹಿಸಿದರು.
ಚಿತ್ರ: ಕೋಲಾರ ಜಿಲ್ಲೆ ಮಾಲುರು ತಾಲೂಕಿನ ಹುಳದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಜಿನಗತಿಮ್ಮನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಕೆರೆ ಅಭಿವೃದ್ದಿಗೆ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್