ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಗ್ರಾಮ ಸಭೆ
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 8 ಮಾರ್ಚ್ 2025 ರಿಂದ 30 ಜೂನ್‌ 2025ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚ
Kharge


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 8 ಮಾರ್ಚ್ 2025 ರಿಂದ 30 ಜೂನ್‌ 2025ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು, ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಎಚ್‌ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ.

ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಲಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande