ಕೋಲಾರ, ಮಾರ್ಚ್.೬ (ಹಿ.ಸ.) :
ಆ್ಯಂಕರ್ : ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಲ್ಲಿ ಜಾಗೃತಿ ಮಾಡಿಸಲು ಇದೇ ತಿಂಗಳ ೯ ರಂದು ಕೋಲಾರ ನಗರದ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಮಹಿಳಾ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಆಶಾ ವೀರೇಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ,ಪ್ರಾತಿನಿಧ್ಯತೆ ದೊರೆತಿದ್ದರೂ ಅದು ಕೇವಲ ತೋರಿಕೆಗೆ ಮಾತ್ರ, ರಾಜಕೀಯವಾಗಿ ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಇನ್ನೂ ಸಾಧ್ಯವಾಗಿಲ್ಲ, ಮಹಿಳೆಯರನ್ನು ಸಶಕ್ತಿಕರಣಗೊಳಿಸಲು ಪಕ್ಷ ಸಮಾವೇಶ ಹಮ್ಮಿಕೊಂಡಿದೆ ಎಂದು ಹೇಳಿದರು.
ಪಕ್ಷದ ಮಹಿಳಾ ಘಟಕದ ಇಂದಿರಾ ರೆಡ್ಡಿ ಮಾತನಾಡಿ ಸಮಾವೇಶ ಬೆಳ್ಳಿಗ್ಗೆ ೧೦:೩೦ಕ್ಕೆ ಪ್ರಾರಂಭವಾಗಲಿದ್ದು, ಸಮಾವೇಶಕ್ಕೆ ಮುನ್ನ ಬಂಗಾರಪೇಟೆ ವೃತ್ತದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥ ನಡೆಸಲಾಗುವುದು, ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರ ಮುನ್ನೂರಕ್ಕೂ ಹೆಚ್ಚು ಮಹಿಳಾ ಮತ್ತು ಪುರುಷ ಪ್ರತಿನಿಧಿಗಳು ಆಗಮಿಸುವ ನಿರೀಕ್ಷೆ ಇದೆ ಎಂದರು.
ಸಮಾವೇಶದ ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯ ಅಧ್ಯಕ್ಷ ಕೃಷ್ಣಾರೆಡ್ಡಿ ಭಾಗಹಿಸಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳಾದ ಪುಷ್ಪ,ಶ್ರೀಮತಿ ಲಕ್ಷ್ಮೀ, ಮುನಿರತ್ನ, ರಂಜಿತ ಮುಂತಾದವರು ಉಪಸ್ಥಿತರಿದ್ದರು.
ಚಿತ್ರ: ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಆಶಾ ವೀರೇಶ್‌ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್