ಗೃಹಜ್ಯೋತಿ ಯೋಜನೆಗೆ ೧೦,೧೦೦ಕೋಟಿ ಅನುದಾನ
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಸರ್ಕಾರವು ಜಾರಿಗೊಳಿಸಿದ ʻಗೃಹಜ್ಯೋತಿʼ ಯೋಜನೆಯಡಿ 1.62 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 9,657 ಕೋಟಿ ರೂ. ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 10,100 ಕೋಟಿ ರೂ. ಒದಗಿಸಲಾಗುವುದು. ರಾಜ್ಯ ಸರ್ಕ
Power


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಸರ್ಕಾರವು ಜಾರಿಗೊಳಿಸಿದ ʻಗೃಹಜ್ಯೋತಿʼ ಯೋಜನೆಯಡಿ 1.62 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 9,657 ಕೋಟಿ ರೂ. ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 10,100 ಕೋಟಿ ರೂ. ಒದಗಿಸಲಾಗುವುದು.

ರಾಜ್ಯ ಸರ್ಕಾರದ ವತಿಯಿಂದ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್‌ಸೆಟ್‌ ವಿದ್ಯುತ್‌ ಸರಬರಾಜಿಗಾಗಿ ಧನಸಹಾಯ ನೀಡುವ ಯೋಜನೆಯಡಿ 33.84 ಲಕ್ಷ ಪಂಪ್‌ಸೆಟ್‌ಗಳಿಗೆ 16,021 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಒಂದು ಪಂಪ್‌ಸೆಟ್‌ಗೆ ಒಂದು ವರ್ಷಕ್ಕೆ ಸರಾಸರಿ 50,000 ರೂ. ಸಹಾಯಧನ ನೀಡಲಾಗುತ್ತಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande