ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಮಹಾತ್ಮಾ ಗಾಂಧಿ ನಗರ ವಿಕಾಸ್ 2.0 ಯೋಜನೆಗೆ 2,000 ಕೋಟಿ ರೂ. ಅನುದಾನವನ್ನು ಘೋಷಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ, UIDF ರಡಿಯಲ್ಲಿ 600 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ರಾಯಚೂರು, ಬೀದರ್ ಹಾಗೂ ಹಾಸನ ನಗರಸಭೆಗಳನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಧಾರವಾಡ ಮಹಾನಗರ ಪಾಲಿಕೆಯನ್ನು ಹೊಸದಾಗಿ ರಚಿಸಲಾಗಿದೆ.
ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 2025-26ನೇ ಸಾಲಿನಲ್ಲಿ 500 ಕೋಟಿ ರೂ. ಒದಗಿಸಲಾಗುವುದು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ನೀಡುತ್ತಿರುವ ನಾಗರಿಕ ಸೇವೆಗಳ ಪಾವತಿ ಹಾಗೂ ತೆರಿಗೆಗಳನ್ನು ತಂತ್ರಜ್ಞಾನ ಆಧರಿಸಿ online payment mechanism ಮೂಲಕ ಸಂಗ್ರಹಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa