ಹಿತ ಕಾಯದ ಸತ್ವಹೀನ ಬಜೆಟ್ : ಜೋಶಿ
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ
Joshi


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ಸಿದ್ದರಾಮಯ್ಯ ₹ 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರೂ ಅದು ಸತ್ವಹೀನವಾಗಿದೆ. ಸರ್ವ ವರ್ಗ, ಸಮಭಾವ ಹಾಗೂ ಸರ್ವ ಪ್ರದೇಶಗಳ ಅಭಿವೃದ್ಧಿಯ ಹಿತಕಾಯಬೇಕಿತ್ತು. ಆದರೆ ಒಂದು ವರ್ಗವನ್ನು ಓಲೈಸುವಂತಿದೆ ಅಷ್ಟೇ ಎಂದು ಹೇಳಿದರು.

ಅಭಿವೃದ್ಧಿಯ ಸಮತೋಲನ ಬಜೆಟ್ ಮಂಡಿಸುವಲ್ಲಿ ಮುಖ್ಯಮಂತ್ರಿ ವಿಫಲರಾಗಿದ್ದಾರೆ. ಉತ್ತಮ‌ ಆದಾಯದಲ್ಲಿದ್ದ ಕರ್ನಾಟಕವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದಾರೆ. ₹ 24,974 ಕೋಟಿ ಇದ್ದ ಸಾಲವನ್ನು ₹ 26,474 ಕೋಟಿಗೆ ಹೆಚ್ಚಿಸಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಮೂಲಸೌಲಭ್ಯಗಳೇ ಹೂಡಿಕೆಗೆ ಆಕರ್ಷಣೆ. ಆದರೆ, ಸಿದ್ದರಾಮಯ್ಯ ಅವರು 16ನೇ ಬಾರಿ ಮಂಡಿಸಿದ ಬಜೆಟ್ ನಲ್ಲಿ ಇಂಥ ವಲಯಕ್ಕೆ ನಿರಾಶದಾಯಕವಾಗಿದೆ ಎಂದು ಜೋಶಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande