ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿರುವ ಕೆಲ ಮಹತ್ವದ ಯೋಜನೆಗಳ ವಿವರ...
ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಓಟಿಟಿ ವೇದಿಕೆಯನ್ನು ಸೃಜಿಸಲು ಕ್ರಮಕೈಗೊಳ್ಳಲಾಗುವುದು.
ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ 'ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ' ಯೋಜನೆ ಅನುಷ್ಠಾನ.
ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧ.
ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa