ಬಳ್ಳಾರಿ, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ದೇವದಾಸಿ ಮಹಿಳೆಯರು ಬಹುತೇಕರು ವಯಸ್ಸಾದವರು ಇರುತ್ತೀರಿ. ವಯೋಸಹಜ ಕಾಯಿಲೆಗಳು ಬಂದರೆ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಬಂದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಅಂಜುಂ ತಾಜ್ ಅವರು ಸಲಹೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ, ದೇವದಾಸಿ ಪುನರ್ವಸತಿ ಯೋಜನೆ, ಕೊಪ್ಪಳ ಮತ್ತು ಸಮುದಾಯ ಆರೋಗ್ಯ ಕೇಂದ್ರ, ವೆಂಕಟಗಿರಿ ಇವರ ಸಂಯುಕ್ತಾಶ್ರಯದಲ್ಲಿ ವೆಂಕಟಗಿರಿಯಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ದೇವದಾಸಿ ಮಹಿಳೆಯರು ಆರೋಗ್ಯದ ಬಗ್ಗೆ ನಿಗಾವಹಿಸಿ, ಸರ್ಕಾರಿ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ಹೇಳಿದರು. ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ ಅವರು ಮಾತನಾಡಿ, ದೇವದಾಸಿ ಮಹಿಳೆಯರು ಇಲಾಖೆಯ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಸುತ್ತಮುತ್ತ ಸಿಗುವ ತರಕಾರಿ, ಕಾಳು ಕಡಿಗಳನ್ನು ಉಪಯೋಗಿಸಿಬೇಕು ಎಂದು ಸಲಹೆ ನೀಡಿದರು.
ಕೊಪ್ಪಳ ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಯೋಳಭಾವಿ ಅವರು, ಮಾಜಿ ದೇವದಾಸಿ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ದೇವದಾಸಿ ಪುನರ್ವಸತಿ ಯೋಜನಾ ಅನುಷ್ಠಾಧಿಕಾರಿ ಸಕ್ಕುಬಾಯಿ, ಫಾರ್ಮಾಸಿ ಅಧಿಕಾರಿ ಜಡಿಯಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಜನಾ ಅನುಷ್ಠಾಧಿಕಾರಿ ಭೀಮಣ್ಣ ನಿರ್ವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್