ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ಹಲವಾರು ಯೋಜನೆಗಳನ್ನು ಪ್ರಾರಂಭಿಸಲು ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ.
ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು 2025-26ನೇ ಸಾಲಿನಲ್ಲಿ ಪ್ರಾರಂಭಿಸಲಾಗುವುದು.
301. 219 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ-ಪಡಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಇಲ್ಲಿಯವರೆಗೆ 53 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.
ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಇದಕ್ಕೆ ಅನುವಾಗುವಂತೆ utility shiftingಗೆ ಅಗತ್ಯ ಕ್ರಮವಹಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa