ಬೆಂಗಳೂರಿಗೆ 7,000 ಕೋಟಿ ರೂ ಬೃಹತ್ ಕೊಡುಗೆ
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ಸರ್ಕಾರವು ಆದ್ಯತೆ ನೀಡುತ್ತದೆ. ಪ್ರತಿ ವರ್ಷ ನೀಡುತ್ತಿರುವ 3,000 ಕೋಟಿ ರೂ. ಅನುದಾನವನ್ನು ಪ್ರಸಕ್ತ ವರ್ಷದಲ್ಲಿ 7,000 ಕೋಟಿ ರೂ. ಗೆ ಹೆಚ್ಚಿಸಲಾಗುವುದು. ಈ
Budget


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ಸರ್ಕಾರವು ಆದ್ಯತೆ ನೀಡುತ್ತದೆ. ಪ್ರತಿ ವರ್ಷ ನೀಡುತ್ತಿರುವ 3,000 ಕೋಟಿ ರೂ. ಅನುದಾನವನ್ನು ಪ್ರಸಕ್ತ ವರ್ಷದಲ್ಲಿ 7,000 ಕೋಟಿ ರೂ. ಗೆ ಹೆಚ್ಚಿಸಲಾಗುವುದು. ಈ ಅನುದಾನವನ್ನು ಬಳಸಿ ಬೃಹತ್‌ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande