ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯವು ಡಿಸೆಂಬರ್ 2024ರ ಅಂತ್ಯಕ್ಕೆ ೪.೪ ಬಿಲಿಯನ್ ಯು.ಎಸ್.ಡಿ ವಿದೇಶಿ ಹೂಡಿಕೆ ಆಕರ್ಷಿಸುವುದರೊಂದಿಗೆ ದೇಶದಲ್ಲಿ 3ನೇ ಸ್ಥಾನದಲ್ಲಿ ಹಾಗೂ 88,853 ಮಿಲಿಯನ್ ಯು.ಎಸ್.ಡಿ ರಫ್ತು ಮಾಡುವುದರೊಂದಿಗೆ ಒಟ್ಟಾರೆ ರಫ್ತಿನಲ್ಲಿ ಅಗ್ರಸ್ಥಾನದಲ್ಲಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಒಟ್ಟಾರೆ ರಫ್ತಿನಲ್ಲಿ ರಾಜ್ಯವು ಶೇ. 11.17 ರಷ್ಟು ಬೆಳವಣಿಗೆಯನ್ನು ಸಾಧಿಸಿರುತ್ತದೆ. ಕರ್ನಾಟಕ ರಾಜ್ಯವು ಕೇಂದ್ರ ಸರ್ಕಾರದ Ease of Doing Business ನಲ್ಲಿಯೂ ಅತ್ಯುತ್ತಮ ಸಾಧಕ ಎಂದು ಗುರುತಿಸಲ್ಪಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa