ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕೊಪ್ಪಳ, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾರ್ಚ್ 8 ಮತ್ತು 9 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಮಾ. 8 ರಂದು
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ


ಕೊಪ್ಪಳ, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾರ್ಚ್ 8 ಮತ್ತು 9 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಮಾ. 8 ರಂದು ಬೆಳಿಗ್ಗೆ 10.30 ಗಂಟೆಗೆ ಕಾರಟಗಿಯಿಂದ ಹೊರಟು, ಬೆಳಿಗ್ಗೆ 11 ಗಂಟೆಗೆಯಿಂದ ಮಷ್ಟೂರು ಮತ್ತು ಡಾಣಾಪುರ ಪಂಚಾಯತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೂಜಾ ಕಾರ್ಯಕ್ರಮ ನೆರವೇರಿಸುವರು. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ನಿರ್ಗಮಿಸಿ, 3.30 ಗಂಟೆಗೆ ಕಾರಟಗಿ ತೆರಳಿ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.

ಮಾ. 9 ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ನಗರದ ಸಾಹಿತ್ಯ ಭವನದಲ್ಲಿ ಬಾಲಭವನ ಸೋಸೈಟಿ ಮತ್ತು ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರದಲ್ಲಿ ಮಧ್ಯಾಹ್ನ 12.30 ಗಂಟೆಗೆ ಕೊಪ್ಪಳದ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದಲ್ಲಿ ಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘವತಿಯಿಂದ ನಡೆಯುವ ಕೆ.ಯುಡಬ್ಲ್ಯೂ.ಜೆ ದತ್ತಿನಿಧಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande