ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ʻನಮ್ಮ ಮೆಟ್ರೋʼ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa