ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಘೋಷಿಸಲಾದ ಹೊಸ ಕೈಗಾರಿಕಾ ನೀತಿ ೨೦೨೫-೩೦ ರಿಂದ ೭.೫0 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ೨೦ ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಹೊಂದಿದೆ.
ಕೈಗಾರಿಕೋದ್ಯಮಿಗಳ ಅನುಸರಣೆಯ ನಿಯಮಗಳು ಮತ್ತು ಷರತ್ತುಗಳ ಸರಳೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕರ್ನಾಟಕ ಉದ್ಯೋಗದಾತ ನಂಬಿಕೆ ವಿಧೇಯಕ ಹಾಗೂ ಕರ್ನಾಟಕ ಉದ್ಯೋಗದಾತ ಅನುಸರಣೆ ಜಾಲಬಂಧ ಮಸೂದೆಗಳನ್ನು ಜಾರಿಗೆ ತರಲಿದೆ. ಇದರ ಮೂಲಕ ಉದ್ಯೋಗದಾತರ ಷರತ್ತುಗಳ ಉಲ್ಲಂಘನೆಯನ್ನು ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರತುಪಡಿಸಲಾಗುವುದು (Decriminalise). ಷರತ್ತುಗಳ ಅನುಸರಣೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲಾಗುವುದು. ಈ ರೀತಿಯ ಉಪಕ್ರಮಗಳನ್ನು ದೇಶದಲ್ಲೆ ಮೊದಲು ಜಾರಿಗೊಳಿಸಲಾಗುವ ಕೀರ್ತಿಯು ನಮ್ಮದಾಗಿದೆ.
ರಾಜ್ಯ ಸರ್ಕಾರವು Karnataka Clean Mobility Policy 2025-30 ಅನ್ನು ಘೋಷಿಸಿದ್ದು, ಇದರಿಂದ ಕ್ಲೀನ್ ಮೊಬಿಲಿಟಿ ವಾಹನ ಮೌಲ್ಯ ಸರಪಳಿಯಲ್ಲಿ 50,000 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುವ ಹಾಗೂ ಸರಿಸುಮಾರು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa