ಕಂಪ್ಲಿ : ವಿದ್ಯುತ್ ವ್ಯತ್ಯಯ
ಕಂಪ್ಲಿ, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪ್ಲಿ-ಹೊಸಪೇಟೆ ರಸ್ತೆ ಅಗಲೀಕರಣ, ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.08 ಮತ್ತು 09 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಂ.10 ಮುದ್ದಾಪುರ, ಕಣಿವೆ ತಿಮ್ಮ
ಕಂಪ್ಲಿ : ವಿದ್ಯುತ್ ವ್ಯತ್ಯಯ


ಕಂಪ್ಲಿ, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪ್ಲಿ-ಹೊಸಪೇಟೆ ರಸ್ತೆ ಅಗಲೀಕರಣ, ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.08 ಮತ್ತು 09 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ಎಲ್ಲಮ್ಮ ಕ್ಯಾಂಪ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ .

ಈ ವ್ಯಾಪ್ತಿಯ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಂಪ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande