ರಾಯಚೂರು ಅಭಿವೃದ್ದಿಗೆ ವಿಶೇಷ ಒಲವು : ಸಚಿವ ಎನ್.ಎಸ್.ಬೋಸರಾಜು
ರಾಯಚೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಆಯವ್ಯಯದಲ್ಲಿ ಮಾನ್ಯ ಮುಖ್ಯಮಂತ್ರಿಗಳು ರಾಯಚೂರ ಜಿಲ್ಲೆಗೆ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. ರಾಯಚೂರು ನಗರದಲ್ಲಿರುವ ರಾಜೀವ್ ಗಾಂಧಿ ಸೂಪರ್ ಆಸ್ಪತ್ರೆಯಲ್ಲಿ ವಿಶ್ವ ಮಟ್ಟದ ಕ್ಯ
ರಾಯಚೂರು ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಒಲವು: ಸಚಿವ ಎನ್.ಎಸ್.ಬೋಸರಾಜು


ರಾಯಚೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಆಯವ್ಯಯದಲ್ಲಿ ಮಾನ್ಯ ಮುಖ್ಯಮಂತ್ರಿಗಳು ರಾಯಚೂರ ಜಿಲ್ಲೆಗೆ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ.

ರಾಯಚೂರು ನಗರದಲ್ಲಿರುವ ರಾಜೀವ್ ಗಾಂಧಿ ಸೂಪರ್ ಆಸ್ಪತ್ರೆಯಲ್ಲಿ ವಿಶ್ವ ಮಟ್ಟದ ಕ್ಯಾನ್ಸ್‍ರ್ ಚಿಕಿತ್ಸೆಯನ್ನು ದೊರಕಿಸುವ ಹಿನ್ನಲೆಯಲ್ಲಿ ಕಿದ್ವಾಯಿ ಫೆರಿಫೆರಲ್ ಚಿಕಿತ್ಸಾ ಕೇಂದ್ರದ ಸ್ಥಾಪನೆ. ಇದಕ್ಕೆ 50 ಕೋಟಿ ಅನುದಾನ ಮೀಸಲು. ಕೆಕೆಆರ್‍ಡಿಬಿ ಅನುದಾನದ ಅಡಿಯಲ್ಲಿ ರಾಯಚೂರು ಹಾಗೂ ಸಿಂಧನೂರಿನಲ್ಲಿ ಜಿಟಿಟಿಸಿ ಸ್ಥಾಪನೆಗೆ ಕ್ರಮ. ರಾಯಚೂರು ನಗರಸಭೆಯನ್ನು, ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೇಗೇರಿಸಲಾಗಿದ್ದು ಅಭಿವೃದ್ದಿಗೆ ಅನುದಾನ ನೀಡುವ ಘೋಷಣೆ. 219 ಕೋಟಿ ರೂಫಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು 53 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. 1696 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ರಾಯಚೂರು - ಸಿಂಧನೂರು 20 ಕಿಲೋಮೀಟರ್ ರಸ್ತೆ ಕಾಮಗಾರಿಯನ್ನ ಪ್ರಸ್ತುತ ವರ್ಷದಲ್ಲಿ ಮುಗಿಸುವ ಘೋಷಣೆ ಮಾಡಿದ್ದಾರೆ. ಅಲ್ಲದೇ, ರಾಯಚೂರು ನಗರದ ಸುತ್ತ ರಿಂಗ್ ರೋಡ್ ನಿರ್ಮಾಣದ ಘೋಷಣೆಯೂ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಗೆ ಆದ್ಯತೆ ನೀಡಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೇಂದ್ರದ ಅನುದಾನದೊಂದಿಗೆ ಪಿಎಂ ಮಿತ್ರ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಲು ಮುಂದಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯ ಅಭಿವೃದ್ದಿಗೆ ಈ ಬಾರಿಯ ಆಯವ್ಯಯದಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ರಾಯಚೂರಿಗೆ ಹಲವಾರು ಯೋಜನೆಗಳನ್ನ ಘೋಷಿಸಿರುವುದಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ತಾವು ಅಭಿನಂದನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದ್ದಾರೆ. ಇಂದಿನ ಬಜೆಟ್ ಭಾಷಣದಲ್ಲಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ರಾಜ್ಯ ಸರಕಾರ ಒತ್ತು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande