ಹರಪನಹಳ್ಳಿ, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಮಾರ್ಚ್ 10 ರಂದು ಶ್ರೀಗೋಣಿಬಸವೇಶ್ವರಸ್ವಾಮಿ ರಥೋತ್ಸವ ಮತ್ತು ಜಾತ್ರೋತ್ಸವ ನಿಮಿತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರ ಅನ್ವಯ ಮಾರ್ಚ್.9 ರಂದು ಬೆಳಗ್ಗೆ 6 ಗಂಟೆಯಿAದ ಮಾ.11 ರ ಬೆಳಗ್ಗೆ 6 ಗಂಟೆವರೆಗೆ ಹರಪನಹಳ್ಳಿ ಪೋಲೀಸ್ ಠಾಣಾ ಕೂಲಹಳ್ಳಿ ಗ್ರಾಮದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಮದ್ಯಮಾರಾಟ ಮತ್ತು ಸಾಗಣಿಕೆ ಮಾಡದಂತೆ ಹಾಗೂ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯಂಗಡಿಗಳನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್