ಕ್ರಾಂತಿಕಾರಿ ಹೆಜ್ಜೆಗೆ ಮುನ್ನುಡಿ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ನಲಯ ಹೆಚ್ಚು ಒತ್ತು ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಬಳಿಕ ಸುದ್ದಿಗಾರರಿಗೆ ಪ್
Gundurao


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ನಲಯ ಹೆಚ್ಚು ಒತ್ತು ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಇಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಕ್ರಾಂತಿಕಾರಿ ಹೆಜ್ಜೆಗಳನ್ನ ಇಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನ ಆಗಿವೆ. ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ವೇತನ ಹೆಚ್ಚಿಸಿದ್ದಾರೆ. ಅರ್ಚಕರ ವೇತನ ಕೂಡ ವಾರ್ಷಿಕ 62 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆಡಳಿತಾತ್ಮಕ ಸುಧಾರಣೆ, ಹಣಕಾಸಿನ ಸುವ್ಯವಸ್ಥೆ ಬಜೆಟ್ ನಲ್ಲಿ ಎದ್ದು ಕಾಣುತ್ತಿದೆ ಎಂದು ಸಚಿವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande