ತೃಪ್ತಿಕರ ಅನುದಾನ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜನಪ್ರಿಯ ಯೋಜನೆಗಳಿಗೆ ಬಜೆಟ್ ನಲ್ಲಿ ಘೋಷಿ
Hebalkar


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜನಪ್ರಿಯ ಯೋಜನೆಗಳಿಗೆ ಬಜೆಟ್ ನಲ್ಲಿ ಘೋಷಿಸಿರುವ ಅನುದಾನ ಸಮಾಧಾನಕರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಈ ಸಾಲಿನ ಬಜೆಟ್ ನಲ್ಲಿ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಿರುವುದು ತೃಪ್ತಿ ತಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande